For the best experience, open
https://m.bcsuddi.com
on your mobile browser.
Advertisement

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

06:55 AM Jun 30, 2024 IST | Bcsuddi
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ
Advertisement

ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ, ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಥಿಗಳು https://shp.karnataka.gov.in/bcwd ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದ ವಾರ್ಷಿಕ ಆದಾಯ 2.50 ಲಕ್ಷ, ಹಾಗೂ ಪ್ರವರ್ಗ-2ಎ, 2ಬಿ,3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿರಬಾರದು.

Advertisement

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/  ನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ  8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement