ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

07:16 AM Oct 04, 2024 IST | BC Suddi
Advertisement

 

Advertisement

ಚಿತ್ರದುರ್ಗ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಹೊಸದಾಗಿ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅ.2 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು  https://shp.karnataka.gov.in/bcwd     ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವರ್ಗಗಳಿಗೆ ವಾರ್ಷಿಕ ಆದಾಯ 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳ ವಾರ್ಷಿಕ ಆದಾಯ ರೂ.1ಲಕ್ಷ ಹೊಂದಿರಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  https://bcwd.karnataka.gov.in/      ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com     ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ
Advertisement
Next Article