For the best experience, open
https://m.bcsuddi.com
on your mobile browser.
Advertisement

ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

07:40 AM Jul 09, 2024 IST | Bcsuddi
ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
Advertisement

     ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ  ಮೂಲಕ ಆಹ್ವಾನಿಸಲಾಗಿದೆ.

ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

Advertisement

ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್,

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Tags :
Author Image

Advertisement