ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

07:07 AM Sep 20, 2024 IST | BC Suddi
Advertisement

ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Advertisement

ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಸ್ಟೇಟ್ ಸ್ಕಾಲರ್‌ಶಿಫ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸಂಬAಧಪಟ್ಟ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಲು ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ: ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಎಸ್.ಎ.ಟಿ.ಎಸ್  ( SATS)   ಸಂಖ್ಯೆ, ಆಧಾರ್ ಕಾರ್ಡ್, ತಂದೆ-ತಾಯಿ ಅಥವಾ ಪೋಷಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಮೊಬೈಲ್ ನಂಬರ್, 1 ರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.6ಲಕ್ಷ ಹಾಗೂ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.2.50 ಲಕ್ಷ ಮೀರಿರಬಾರದು. ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ  (NPCI)      ನಲ್ಲಿ ಸೀಡಿಂಗ್ ಮಾಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Tags :
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ
Advertisement
Next Article