ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ವಶಕ್ಕೆ

01:40 PM Dec 08, 2023 IST | Bcsuddi
Advertisement

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಆರೋಪದಲ್ಲಿ ಯುವಕನೋರ್ವನನ್ನು ಮೆಟ್ರೋ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

ಆರೋಪಿ ಯುವಕನನ್ನು ಲೋಕೇಶ್ ಎಂದು ಗುರುತಿಸಲಾಗಿದೆ .

ಈತ ಗುರುವಾರ ಬೆಳಗ್ಗೆ ಮೆಟ್ರೋ ಹತ್ತಿದ್ದು, ಪ್ರಯಾಣಿಕೆಯಾಗಿದ್ದ 22 ವರ್ಷದ ಯುವತಿಯ ಮೈಕೈ ಮುಟ್ಟಿದ್ದು, ಯುವತಿ ಕೂಗುತ್ತಿದ್ದಂತೆ ಮುಂದಿನ ನಿಲ್ದಾಣದಲ್ಲಿ ಪರಾರಿಯಾಗಲು ಯತ್ನಿಸಿದ್ದ. ತಕ್ಷಣ ಮೆಟ್ರೋ ಭದ್ರತಾ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ

ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು ಈ ಹಿಂದೆ ಬಿಎಂಟಿಸಿ ಬಸ್​ನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿಕೊಂಡಿದ್ದ. ಈತನ ಮೇಲೆ ಈ ಹಿಂದೆ ಕೂಡ ಕೆಲ ಕೇಸ್​ ಗಳೂ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ಬಳಿಯಿಂದ 20 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆಂಗಳೂರು ಮೆಟ್ರೋದಲ್ಲಿ ಈ ಹಿಂದೆಯೂ ಇಂತಹ ಲೈಂಗಿಕ ಕಿರುಕುಳ, ಕಳ್ಳತನ ಹಲವಾರು ಘಟನೆಗಳು ನಡೆದಿದ್ದು ಆದಷ್ಟು ಬೇಗ ಸಂಭಂಧಪಟ್ಟ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಿದೆ.

Advertisement
Next Article