For the best experience, open
https://m.bcsuddi.com
on your mobile browser.
Advertisement

ಮೆಟ್ರೋ ನಿಲ್ದಾಣದ ಭಾಗ ಕುಸಿತ - ನಾಲ್ವರ ಸ್ಥಿತಿ ಗಂಭೀರ

03:48 PM Feb 08, 2024 IST | Bcsuddi
ಮೆಟ್ರೋ ನಿಲ್ದಾಣದ ಭಾಗ ಕುಸಿತ   ನಾಲ್ವರ ಸ್ಥಿತಿ ಗಂಭೀರ
Advertisement

ನವದೆಹಲಿ: ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ತಕ್ಷಣ ಆತನನ್ನು ರಕ್ಷಣೆ ಮಾಡಿ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಗಾಯಗಳಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

ಇನ್ನು ಈ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕ್ರೇನ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

Author Image

Advertisement