ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೆಟ್ರೋ ರೈಲು ಹಳಿಗೆ ಜಿಗಿದು ಲಾ ವಿದ್ಯಾರ್ಥಿ ಆತ್ಮಹತ್ಯೆ

10:00 AM Mar 22, 2024 IST | Bcsuddi
Advertisement

ಬೆಂಗಳೂರು: ಚಲಿಸುತ್ತಿದ್ದ ಮೆಟ್ರೋ ಹಳಿಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ಯುವಕ ಕಾನೂನು ವಿದ್ಯಾರ್ಥಿ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ 2:10ಘಂಟೆಗೆ ಘಟನೆ ನಡೆದಿದೆ. . ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಹಳಿಗೆ ಧುಮುಕಿದ್ದು, ಮೆಟ್ರೊ ಆಡಳಿತ ಮಂಡಳಿ ಕೂಡಲೇ ಮೆಟ್ರೋ ರೈಲನ್ನು ನಿಲ್ಲಿಸಿದ್ದಾರೆ. ಬಳಿಕ ರೈಲ್ವೆ ಹಳಿಗೆ ಬಿದ್ದ ವಿದ್ಯಾರ್ಥಿಯ ಮೃತದೇಹವನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ.

ಇನ್ನು ಈ ಕುರಿತು ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದು, ಆತ್ಮಹತ್ಯೆ ಮಾಡಿಕೊಂಡಾತ ಕಾನೂನು ವಿದ್ಯಾರ್ಥಿ. ಮೊದಲ ವರ್ಷದ ಕಾನೂನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಧ್ರುವ ಎಂದು ತಿಳಿದು ಬಂದಿದ್ದು, ಘಟನೆಯಿಂದ ವಿದ್ಯಾರ್ಥಿಯ ರುಂಡ ಮುಂಡ ಬೇರ್ಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Next Article