ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

06:53 PM Apr 06, 2024 IST | Bcsuddi
Advertisement

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್​​ಐ) ಮಹಿಳಾ ಹಾಸ್ಟೆಲ್​ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್​​ನಲ್ಲಿ 29 ವಿದ್ಯಾರ್ಥಿನಿಯರು, ಐವರು ಹೆಚ್ ಬ್ಲಾಕ್​ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ‌.ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ. ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್‌ ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲರಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಲು ಕಾರಣವೇನು? ನೀರಿನಲ್ಲಿ ಏನಾದರೂ ಹೆಚ್ಚು ಕಡಿಮೆಯಾಗಿದ್ಯಾ? ಅಥವಾ ಊಟದಲ್ಲಿ ಏನಾದರೂ ಸಮಸ್ಯೆಯಾಗಿದ್ಯಾ ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Next Article