ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೇ. 29ರಿಂದ ಶೈಕ್ಷಣಿಕ ತರಗತಿ ಆರಂಭ

01:34 PM May 27, 2024 IST | Bcsuddi
Advertisement

ಬೆಂಗಳೂರು: ಇನ್ನೇನು ರಾಜ್ಯದ ಶಾಲಾ ಮಕ್ಕಳ ಬೇಸಿಗೆ ರಜೆ ಕೊನೆಗೊಳ್ಳಲಿದ್ದು, ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ತರಗತಿ ಮೇ.29ರಿಂದ ಆರಂಭವಾಗಲಿದೆ.

Advertisement

ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಈ ಸಾಲಿನ ಶಾಲೆಗಳ ಆರಂಭದಲ್ಲೇ ಮಕ್ಕಳ ಕಲಿಕಾ ಗುಣಮಟ್ಟ ಪರಿಶೀಲನೆ, ಸುಧಾರಣೆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮ, ಇತರೆ ತರಬೇತಿಗಳನ್ನು ಕೈಗೊಳ್ಳಲು ಮುಂದಾಗಿದೆ. ಇದಕ್ಕೆ ಸಂಬಂಧ ಶಾಲೆಗಳಿಗೆ ಸೂಚನೆಗಳನ್ನು ನೀಡಿದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದ್ದು. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನುನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

 

Advertisement
Next Article