ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ಭಾರತಕ್ಕೆ?

02:05 PM May 06, 2024 IST | Bcsuddi
Advertisement

ಬೆಂಗಳೂರು:ಚುನಾವಣೆ ಹೊತ್ತಲ್ಲಿ ದೇಶಾದ್ಯಂತ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ಟೀಕಿಸುತ್ತಿದೆ. ರಾಷ್ಟ್ರ ನಾಯಕರೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಪ್ರಜ್ವಲ್ ಕೇಸ್ ಅ​ನ್ನೇ ದಾಳ ಮಾಡಿಕೊಂಡಿದ್ದಾರೆ.

Advertisement

ಈ ಮಧ್ಯೆ ಮೇ 7ರಂದು ಮತದಾನ ಮುಗಿದ ನಂತರ ಪ್ರಜ್ವಲ್ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್ ದೇಶ ಬಿಟ್ಟು ಹೊರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು.

ಮೇ 5ರಂದೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಬಗ್ಗೆಹಬ್ಬಿತ್ತು. ಬೆಂಗಳೂರು, ಮಂಗಳೂರು, ಗೋವಾ ಅಥವಾ ಕೊಚ್ಚಿ ಏರ್​ಪೋರ್ಟ್​ಗಳಲ್ಲಿ ಎಸ್​ಐಟಿ ಅಧಿಕಾರಿಗಳು ಕಾದು ಕುಳಿತಿದ್ದರು. ಆದ್ರೆ ಪ್ರಜ್ವಲ್ ಬರಲೇ ಇಲ್ಲ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್​ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ.

 

Advertisement
Next Article