ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಐಎಎಫ್ ಮಹಿಳಾ ಅಗ್ನಿವೀರರು ಭಾಗಿ

11:53 AM Jan 09, 2024 IST | Bcsuddi
Advertisement

ನವದೆಹಲಿ: ಭಾರತೀಯ ವಾಯುಪಡೆ(ಐಎಎಫ್)ಯ ಮಹಿಳಾ ಅಗ್ನಿವೀರರು ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಐಎಎಫ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಈ ಕುರಿತು ಐಎಎಫ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿ, ಭಾರತೀಯ ವಾಯುಪಡೆಯ ಭಾಗವಾಗಿರುವುದಕ್ಕೆ ಹೆಮ್ಮೆ ಇದೆ. ಇದೇ ವೇಳೆ ಮಹಿಳಾ ಅಗ್ನಿವೀರ್‌ ವಾಯು ಆಗಿ ಗಣ ರಾಜ್ಯೋತ್ಸವ ಪರೇಡ್‌ನ‌ಲ್ಲಿ ಭಾಗವಹಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದು ಹೇಳಿದೆ.

ಇನ್ನು ಕೇಂದ್ರ ಸರಕಾರವು ಅಗ್ನಿಪಥ್‌ ಯೋಜನೆಯನ್ನು 2022ರ ಸೆಪ್ಟಂಬರ್‌ನಲ್ಲಿ ಜಾರಿಗೊಳಿಸಿದ್ದು, ಇದೇ ಮೊದಲ ಬಾರಿಗೆ ಮಹಿಳಾ ಅಗ್ನಿವೀರರು ದೆಹಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Advertisement
Next Article