ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೊದಲ ಹಂತದ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಚಾಲನೆ ನೀಡಿದ ಡಿಸಿಎಂ ಡಿಕೆಶಿ

02:05 PM Jul 15, 2024 IST | Bcsuddi
Advertisement

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು - ಸುಗಮ ಸಂಚಾರ ಬೆಂಗಳೂರು" ಪರಿಕಲ್ಪನೆಯಡಿ ಪಶ್ಚಿಮ ವಲಯ ವ್ಯಾಪ್ತಿಯ ಗಾಂಧಿ ನಗರ, ಮಲ್ಲೇಶ್ವರಂ, ಮಹಾಲಕ್ಷ್ಮೀ ಲೇಔಟ್ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲನೇ ಹಂತದ ವೈಟ್ ಟ್ಯಾಪಿಂಗ್ ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಈ‌ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಸ್ಥಳೀಯ ಶಾಸಕರಾದ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಕೆ. ಗೋಪಾಲಯ್ಯ, ಆಡಳಿತಗಾರ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ವಲಯ ಜಂಟಿ ಆಯುಕ್ತ ಪಲ್ಲವಿ, ಪ್ರಧಾನ ಅಭಿಯಂತರ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Advertisement
Next Article