For the best experience, open
https://m.bcsuddi.com
on your mobile browser.
Advertisement

ಮೋದಿಗೆ ಅಪಶಕುನ ಎಂದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್..!

09:45 AM Nov 24, 2023 IST | Bcsuddi
ಮೋದಿಗೆ ಅಪಶಕುನ ಎಂದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್
Advertisement

ನವದೆಹಲಿ: ರಾಜಸ್ಥಾನದ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅಪಶಕುನ ಎಂದು ಕರೆದಿದ್ದರು. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಇದರ ಅನ್ವಯ ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ನೀಡಿರುವ ದೂರಿಗೆ ಉತ್ತರ ನೀಡುವಂತೆ ರಾಹುಲ್ ಗಾಂಧಿಗೆ ಗುರುವಾರ ನೋಟಿಸ್ ನೀಡಿದೆ. ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್​ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಲ್ಲದೆ, ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದೆ.

ಬಿಜೆಪಿ ದೂರು ನೀಡಿರುವ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿಗೆ ನೋಟಿಸ್​ ಹೊರಡಿಸಿರುವ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ನಿಮ್ಮ ವಿರುದ್ಧ ಕ್ರಮ ಯಾಕೆ ಜರುಗಿಸಬಾರದು ಎಂಬುದಕ್ಕೆ ಶುಕ್ರವಾರ (ನ.24) ಸಂಜೆ 6 ಗಂಟೆಯೊಳಗೆ ಉತ್ತರ ನೀಡುವಂತೆ ತಾಕೀತು ಮಾಡಿದೆ.

Advertisement

Author Image

Advertisement