ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೋದಿ ಸಂಪುಟದಲ್ಲಿ ಸಚಿವರಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಪ್ರಮಾಣವಚನ ಸ್ವೀಕಾರ ಸಾಧ್ಯತೆ

05:37 PM Jun 09, 2024 IST | Bcsuddi
Advertisement

ನವದೆಹಲಿ: ನರೇಂದ್ರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಸತತ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಕೂಡ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದ್ದು, ಅವರನ್ನು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನರೇಂದ್ರ ಮೋದಿ ಜೊತೆಗೆ ಕೆಲವು ಸಚಿವರು ಮಾತ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಈ ತಿಂಗಳು ಮುಕ್ತಾಯಗೊಳ್ಳಲಿದೆ. ಹೀಗಾಗಿ, ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ. ಗುಜರಾತ್ ಸಂಸದ ಸಿಆರ್ ಪಾಟೀಲ್ ಕೂಡ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರ ತಾತ್ಕಾಲಿಕ ಪಟ್ಟಿಯಲ್ಲಿ ಜೆಡಿಎಸ್ ನಾಯಕ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಕೂಡ ಕೇಳಿಬರುತ್ತಿದೆ.

Advertisement

Advertisement
Next Article