For the best experience, open
https://m.bcsuddi.com
on your mobile browser.
Advertisement

ಮೋದಿ ಸಂಪುಟದಲ್ಲಿ ಹೆಚ್‌ಡಿಕೆಗೆ ಸ್ಥಾನ: ಸುಳಿವು ನೀಡಿದ ಡಾ.ಮಂಜುನಾಥ್

12:18 PM Jun 09, 2024 IST | Bcsuddi
ಮೋದಿ ಸಂಪುಟದಲ್ಲಿ ಹೆಚ್‌ಡಿಕೆಗೆ ಸ್ಥಾನ  ಸುಳಿವು ನೀಡಿದ ಡಾ ಮಂಜುನಾಥ್
Advertisement

ನವದೆಹಲಿ: ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಾಜಿ ಸಿಎಂ, ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಸ್ಥಾನ ಸಿಗಲಿದೆ ಎಂದು ಬಿಜೆಪಿ ಸಂಸದ ಡಾ.ಮಂಜುನಾಥ್ ಸುಳಿವು ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಇಂದು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದು ತಿಳಿಸಿದ್ದಾರೆ.

ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಟ್ಟು ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ತಯಾರಿ ನಡೆದಿದೆ.

Advertisement

Author Image

Advertisement