ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೋದಿ ಹತ್ತು ವರ್ಷ ಜನರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಶೂನ್ಯ: ಸಿದ್ದರಾಮಯ್ಯ.!

05:42 PM Apr 23, 2024 IST | Bcsuddi
Advertisement

 

Advertisement

 

ಚಿತ್ರದುರ್ಗ: ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದರು. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ. ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು.

ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಪ್ರಶ್ನಿಸಿದರು.

 

Tags :
ಮೋದಿ ಹತ್ತು ವರ್ಷ ಜನರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಶೂನ್ಯ: ಸಿದ್ದರಾಮಯ್ಯ.!
Advertisement
Next Article