ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಕ್ಷಗಾನದ ಗಾನಕೋಗಿಲೆ, ಜನಪ್ರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನು ನೆನಪು ಮಾತ್ರ

11:13 AM Apr 25, 2024 IST | Bcsuddi
Advertisement

ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67) ಇನ್ನು ನೆನಪು ಮಾತ್ರ. ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

Advertisement

ಬಡಗುತಿಟ್ಟು ಯಕ್ಷಗಾನ ಅಭಿಮಾನಿಗಳಲ್ಲಿ ಅವರು ‘ಗಾನಕೋಗಿಲೆ’ ಎಂದೇ ಜನಪ್ರಿಯರಾಗಿದ್ದರು. ಭಾಗವತರ ಅಂತ್ಯಕ್ರಿಯೆಯು ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. 1957 ಸೆಪ್ಟೆಂಬರ್ 5 ರಂದು ಜನಿಸಿದ್ದ ಅವರು, ಯಕ್ಷಗಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದರು. ಹೊಸ ಹಾಗೂ ಹಳೆಯ ಪ್ರಸಂಗಗಳಲ್ಲಿ ಪರಿಣಿತರಾಗಿದ್ದ ಅವರು ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿದ್ದರು.

ಪ್ರಶಸ್ತಿಗಳು..! ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಇವರನ್ನು ಹುಡುಕಿಕೊಂಡು ಬಂದಿತ್ತು. ನಾರಾಯಣಪ್ಪ ಉಪ್ಪೂರ ಧಾರೇಶ್ವರ ಅವರ ಗುರುಗಳಾಗಿದ್ದರು. 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರ ಅವರ ಕಂಠದಲ್ಲಿವೆ. ಅವರ ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ಪ್ರಸಂಗಗಳು ಇಂದಿಗೂ ಅಚ್ಚಳಿಯದೇ ಉಳಿದಿವೆ.

Advertisement
Next Article