For the best experience, open
https://m.bcsuddi.com
on your mobile browser.
Advertisement

ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

03:21 PM May 27, 2024 IST | Bcsuddi
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
Advertisement

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಮತಾ ಮೃತ ಮಹಿಳೆಯಾಗಿದ್ದು ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.

Advertisement

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

Author Image

Advertisement