ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ: 10 ಮಂದಿ ಮೃತ್ಯು, 33 ಮಂದಿಗೆ ಗಾಯ

12:37 PM Jun 10, 2024 IST | Bcsuddi
Advertisement

ಕೋಲ್ಕತ್ತ: ಜಮ್ಮು ಮತ್ತು ಕಾಶ್ಮೀ ರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನಿಖೆಗೆ ಆಗ್ರಹಿಸಿದ್ದಾರೆ.

Advertisement

ಜಮ್ಮು ಮತ್ತು ಕಾಶ್ಮೀ ರದಲ್ಲಿ ಯಾತ್ರಾರ್ಥಿ ಗಳಿದ್ದ ಬಸ್ ಮೇ ಲೆ ಉಗ್ರರು ದಾಳಿ ನಡೆಸಿರುವ ವಿಷಯ ತಿಳಿದು ದುಃ ಖವಾಗಿದೆ. ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ತಕ್ಷಣವೇ ತನಿಖೆ ಆರಂಭಿಸಬೇಕು. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂ ದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀ ರದ ರಿಯಾಸಿ ಜಿಲ್ಲೆಯ ಪೋನಿ ಪ್ರದೇಶದ ತೇರ್ಯತ್ ಗ್ರಾಮದಲ್ಲಿ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದರ ಮೇಲೆ ಭಾನುವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದು, 33 ಜನರು ಗಾಯಗೊಂಡಿದ್ದಾರೆ.

ರಸ್ತೆ ಬದಿಯಲ್ಲಿ ಅವಿತ್ತಿದ್ದ ಉಗ್ರರು ಹಿಂದೂಗಳು ತೆರಳುತ್ತಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ರಸ್ತೆ ಬದಿಯಿಂದ ದಾಳಿ ನಡೆಸಿದ್ದ ಉಗ್ರರು ಕಂದಕಕ್ಕೆ ಬಿದ್ದ ನಂತರ ಬಸ್ಸು ಬಳಿ ಬಂದು ಹಲವು ನಿಮಿಷ ಗುಂಡಿನ ದಾಳಿ ನಡೆಸಿದ್ದಾರೆ.

ರಸ್ತೆಯ ಪಕ್ಕದ ಅರಣ್ಯದಲ್ಲಿ ಅವಿತಿದ್ದ ಉಗ್ರರು ಬಸ್ಸಿನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಬಸ್ಸಿನ ಚಾಲಕನಿಗೆ ಬುಲೆಟ್ ತಗುಲಿದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸು ಕಂದಕಕ್ಕೆ ಬಿದ್ದಿದೆ.

 

Advertisement
Next Article