ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರ ದಾಳಿ ಕೇಸ್: ಎನ್‌ಐಎಗೆ ವರ್ಗಾವಣೆ

04:55 PM Jun 17, 2024 IST | Bcsuddi
Advertisement

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಯಾತ್ರಾರ್ಥಿಗಳ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತು ಅಮರನಾಥ ಯಾತ್ರೆಯ ಸಿದ್ಧತೆಗಳ ಕುರಿತು ಭಾನುವಾರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ರಿಯಾಸಿ ಜಿಲ್ಲೆಯಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿ ಮತ್ತು ಇತರ ಕೆಲವು ಭಯೋತ್ಪಾದಕ ಘಟನೆಗಳ ಕುರಿತು ಚರ್ಚಿಸಲಾಗಿತ್ತು. ಇದೀಗ ಈ ಸಭೆಯ ಬಳಿಕ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿದೆ.

ಜೂನ್ 9 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದರು. ಘಟನೆಯಲ್ಲಿ 41 ಜನ ಗಾಯಗೊಂಡಿದ್ದರು. ಯಾತ್ರಾರ್ಥಿಗಳು ಬಸ್ಸಿನಲ್ಲಿ ಶಿವ ಖೋರಿ ದೇವಸ್ಥಾನದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದರು.

 

Advertisement
Next Article