For the best experience, open
https://m.bcsuddi.com
on your mobile browser.
Advertisement

ಯುಗಾದಿ ಎಲ್ಲರಿಗೂ ಸಂತೋಷ, ಸಮೃದ್ಧಿ ಕರುಣಿಸಲಿ - ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

11:19 AM Apr 09, 2024 IST | Bcsuddi
ಯುಗಾದಿ ಎಲ್ಲರಿಗೂ ಸಂತೋಷ  ಸಮೃದ್ಧಿ ಕರುಣಿಸಲಿ   ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
Advertisement

ನವದೆಹಲಿ : ಇಂದು ನಾಡಿನಾದ್ಯಂತ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಯುಗಾದಿ ಹಬ್ಬಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಈ ಕುರಿತು "ಎಕ್ಸ್"ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭಾಶಯಗಳು. ಎಲ್ಲರಿಗೂ ಅಪರಿಮಿತ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷವನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.

Advertisement
Author Image

Advertisement