ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

07:36 AM May 30, 2024 IST | Bcsuddi
Advertisement

 

Advertisement

ಚಿತ್ರದುರ್ಗ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ, ಶ್ರವ್ಯ, ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.

ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ನಮ್ಮ ರಂಗಶಾಲೆಯ ವೆಬ್‍ಸೈಟ್ www.theatreschoolsanehlli.org ನಲ್ಲಿ ಪ್ರವೇಶ ಅರ್ಜಿಗಳನ್ನು ಡೌನ್‍ಲೋಡ್ ಮಾಡಿ ಜೂನ್ 25ರ ಒಳಗಾಗಿ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448398144-8861043553 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

========

Tags :
ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
Advertisement
Next Article