ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಂಜಾನ್ ತಿಂಗಳಲ್ಲಿ ರಾಜ್ಯದ ಉರ್ದು ಪ್ರಾಥಮಿಕ, ಪ್ರೌಢಶಾಲೆಗಳ ʻಶಾಲಾ ಅವಧಿ ಬದಲಾವಣೆʼ : ರಾಜ್ಯ ಸರ್ಕಾರ ಆದೇಶ

04:54 PM Mar 07, 2024 IST | Bcsuddi
Advertisement

ಬೆಂಗಳೂರು : ರಂಜಾನ್‌ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ. ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಸೂಚಿಸಲಾಗಿದೆ.

Advertisement

Advertisement
Next Article