ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ - 7 ಗ್ಯಾರಂಟಿ ಘೋಷಣೆ

03:34 PM Nov 21, 2023 IST | Bcsuddi
Advertisement

ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು.

Advertisement

ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ನಡೆಸಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ.

ಕರ್ನಾಟಕದ ಮಾದರಿಯಲ್ಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ 10,000 ರೂ., ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ,ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಹೇಳಿದೆ.

ಚಿರಂಜೀವಿ ವಿಪತ್ತು ಪರಿಹಾರ ವಿಮೆ ಯೋಜನೆಯಡಿ ಪ್ರತಿಯೊಬ್ಬರಿಗೂ 15 ಲಕ್ಷ ರೂ. ವಿಮೆ ನೀಡಲಾಗುವುದು, 500 ರೂ.ಯಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ, ರಾಜ್ಯದ ಪ್ರತಿಯೊಂದು ಮಗುವಿಗೂ ಇಂಗ್ಲಿಷ್ ಶಿಕ್ಷಣ ನೀಡಲಾಗುವುದು, ಹಳೆ ಪಿಂಚಣಿ ವ್ಯವಸ್ಥೆ, ಚಿರಂಜೀವಿ ವಿಪತ್ತು ಪರಿಹಾರ ವಿಮೆ ಯೋಜನೆಯಡಿ ಪ್ರತಿಯೊಬ್ಬರಿಗೂ 15 ಲಕ್ಷ ರೂ. ವಿಮೆ ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.

Advertisement
Next Article