ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ.!

08:31 AM Jul 27, 2024 IST | Bcsuddi
Advertisement

 

Advertisement

 

ಬೆಂಗಳೂರು:  ಇಂದಿನಿಂದ ಮುಂದಿನ ಐದು ದಿನ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಜು.29ರಿಂದ ಮುಂದಿನ 3 ದಿನಕ್ಕೆ ಈ ಎಲ್ಲಾ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ. ಜು.30ರಿಂದ ದಕ್ಷಿಣ ಒಳನಾಡಿನಲ್ಲಿ ಜು.31ರಿಂದ ಉತ್ತರ ಒಳನಾಡಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

Tags :
ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ.!
Advertisement
Next Article