ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ': ದಿನೇಶ್ ಗುಂಡುರಾವ್

01:05 PM Jul 08, 2024 IST | Bcsuddi
Advertisement

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ವರ್ಷ ದಾಖಲಾದ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಬರೋಬ್ಬರಿ 7,000 ಗಡಿಯನ್ನು ಮೀರಿದೆ. ಇನ್ನು ಕಳೆದ ಜನವರಿಯಿಂದ ಇದುವರೆಗೂ ಡೆಂಗ್ಯೂ ಜ್ವರದಿಂದ 6 ಮಂದಿ ಮೃತಪಟ್ಟಿದ್ದಾರೆ ಎಂದು ಇಲಾಖೆ ತಿಳಿಸಿದೆ.

Advertisement

ರಾಜ್ಯ ರಾಜಧಾನಿಯಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಂದರೆ, 80 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 1,988 ತಲುಪಿದೆ.

ಮೈಸೂರಿನಲ್ಲಿ 496 ಪ್ರಕರಣಗಳು, ಹಾವೇರಿಯಲ್ಲಿ 481 ಪ್ರಕರಣ, ಧಾರವಾಡದಲ್ಲಿ 289 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಚಿತ್ರದುರ್ಗದಲ್ಲಿ ಇದುವರೆಗೆ 275 ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 292, ಮಂಡ್ಯ ಜಿಲ್ಲೆಯಲ್ಲಿ 215, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 263 ಪ್ರಕರಣಗಳಿವೆ.

ಇನ್ನೊಂದೆಡೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ತೀವ್ರವಾಗಿ ಮೇಲ್ವಿಚಾರಣೆ, ಇವುಗಳ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅಗತ್ಯಬಿದ್ದಲ್ಲಿ ಈಡಿಸ್ ಸೊಳ್ಳೆಗಳ ನಿಯಂತ್ರಣಕ್ಕೆ ಔಷಧ ಸಿಂಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

 

Advertisement
Next Article