ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರದಲ್ಲೂ ಹೆಚ್ಚಳ

12:04 PM Jun 25, 2024 IST | Bcsuddi
Advertisement

ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಬೆಲೆ ಏರಿಕೆಯ ಬಿಸಿಯನ್ನು ಮತ್ತೊಮ್ಮೆ ಮುಟ್ಟಿಸಿದೆ. ಕೆಲ ದಿನಗಳ ಹಿಂದಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಹಾಲಿನ ದರದಲ್ಲೂ ಏರಿಕೆ ಮಾಡಲಾಗಿದೆ. ಹೌದು. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ. ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್ ಹೆಚ್ಚುವರಿ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

Advertisement
Next Article