ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ.! ಕೆ.ಜೆ. ಜಾರ್ಜ್‌

08:04 AM Feb 20, 2024 IST | Bcsuddi
Advertisement

 

Advertisement

ಬೆಂಗಳೂರು : ರಾಜ್ಯದಲ್ಲಿಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಮಳೆ ಕೊರತೆ ಹಿನ್ನೆಲೆಯಲ್ಲಿ ಅಣೆಕಟ್ಟೆಗಳ ನೀರಿನಿಂದ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದಿಸಿ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್‌ ಕೊರತೆ ವೇಳೆ ದಿನವಹಿ ಆಧಾರದಲ್ಲಿ ವಿದ್ಯುತ್‌ ವಿನಿಮಯ ಕೇಂದ್ರಗಳಿಂದಲೇ ವಿದ್ಯುತ್‌ ಖರೀದಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಜ.24ರವರೆಗೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 36,697 ಮೆಗಾವ್ಯಾಟ್‌ ಇದೆ. ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರೂ, ಕೃಷಿ ಚಟುವಟಿಕೆಗೆ ತೊಂದರೆಯಾಗಬಾರದೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ ಎಂದು ತಿಳಿಸಿದರು.

Tags :
ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ.! ಕೆ.ಜೆ. ಜಾರ್ಜ್
Advertisement
Next Article