ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ'- ಸಿಎಂ ಸಿದ್ದರಾಮಯ್ಯ

03:41 PM Jun 17, 2024 IST | Bcsuddi
Advertisement

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ. ಈ ಬಗ್ಗೆ ಇಲಾಖೆಯೊಂದಿಗೆ ಚರ್ಚೆ ಮಾಡಬೇಕು‌ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Advertisement

ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಲು ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿಲ್ಲ. ಬದಲಿಗೆ, ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತೈಲ ಬೆಲೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಿದರು.

ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು ರೂ. ಏರಿಕೆ ಮಾಡಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ನಮ್ಮ ಅಕ್ಕ-ಪಕ್ಕದ ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಿದೆ. ನಮ್ಮಲ್ಲಿ ಅಲ್ಲಿಗಿಂತ ದರ ಕಡಿಮೆ ಇದೆ. ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ತೈಲ ಬೆಲೆ ಇಲ್ಲಿಗಿಂತ ಅಧಿಕವಾಗಿದೆ. ಆದರೂ, ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಕೇಂದ್ರದ ವಿರುದ್ಧ ಧರಣಿ ಮಾಡಬೇಕು ಎಂದರು.

 

Advertisement
Next Article