ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಕೆಲವು ಕಡೆಗಳಲ್ಲಿ ಮಳೆ ಮುನ್ಸೂಚನೆ

10:58 AM Mar 18, 2024 IST | Bcsuddi
Advertisement

ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣ ಹವೆ ಮುಂದುವರೆಯಲಿದೆ.

Advertisement

ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಮುಂದುವರೆಯಲಿದೆ.

Advertisement
Next Article