ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ.!

07:47 AM Aug 11, 2024 IST | BC Suddi
Advertisement

 

Advertisement

 

ಬೆಂಗಳೂರು : ಇದೀಗ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಗುಡುಗು, ಸಿಡಿಲು ಹಾಗೂ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯ ಅಲರ್ಟ್ ನೀಡಿದೆ.

ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಗಾಳಿ ಮಳೆ ಹಾಗೂ ಗುಡುಗು ಸಿಡಿಲು ಅಪ್ಪಳಿಸುವ ಸಾಧ್ಯತೆ ಇದೆ, ಆಗಸ್ಟ್ 9 ರಂದು ಸಂಜೆ ಈ ಅಲರ್ಟ್ ನೀಡಿದ್ದು ರಾತ್ರಿಯವರೆಗೂ ಮುಂದುವರಿಯಲಿದೆ.

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳುವಂತೆ, ಭಾರೀ ಗಾಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಆಗಸ್ಟ್ 9 ರಂದು ಸಂಜೆ 6 ಗಂಟೆಗೆ ಅಲರ್ಟ್ ನೀಡಿದೆ.ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗುಡುಗು ಸಿಡಿಲು ಬಡಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags :
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ.!
Advertisement
Next Article