For the best experience, open
https://m.bcsuddi.com
on your mobile browser.
Advertisement

ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ, 55 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

10:40 AM Oct 19, 2024 IST | BC Suddi
ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ  55 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ
Advertisement

ಬೆಂಗಳೂರು: ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ತಕ್ಷಣವೇ ವರ್ಗಾಯಣೆಯಾದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ವರ್ಗಾವಣೆ ಮಾಡಲಾಗಿದೆ. ಡಿವೈಎಸ್‌ಪಿಗಳಾದ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್‌ ಸಿಟಿ ಉಪ ವಿಭಾಗ ಹಾಗೂ ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್‌ಗೆ ವರ್ಗಾವಣೆ ಮಾಡಲಾಗಿದೆ. ಉಳಿದ ಡಿವೈಎಸ್‌ಪಿಗಳನ್ನು ಇತರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತವಾರ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‌ಪಿ ರಘುಕುಮಾರ್ ವಿ ಅವರನ್ನು ವಲಯ ಕಚೇರಿ, ಬಳ್ಳಾರಿಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಲುವರಾಜು ಬಿ ಅವರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ನೀಲಪ್ಪ ಮಲ್ಲಪ್ಪ ಓಲೇಕಾರ ಅವರನ್ನು ಖಾನಾಪುರ ಪಿಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗೋಪಾಲ್ ನಾಯಕ್‌ರನ್ನು ಬಿಎಂಟಿಎಫ್, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಬಿಎಂಟಿಎಫ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೆವಿ ಅವರನ್ನು ಪ್ರಧಾನ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆ ಆದೇಶದಲ್ಲಿದ್ದ ಕೆ.ಎಂ. ಸತೀಶ ಅವರನ್ನು ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಉಮೇಶ್ ಬಸಯ್ಯ ಚಿಕ್ಕಮಠ ಅವರನ್ನು ಹುಬ್ಬಳ್ಳಿ-ಧಾರವಾಡ ನಗರದ ದಕ್ಷಿಣ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. 55 ಪೊಲೀಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ 55 ಪೊಲೀಸ್ ಇನ್ಸ್‌ಪೆಕ್ಟರ್ ಗಳನ್ನು ರಾಜ್ಯ ವಿವಿಧ ಕಡೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಶ್ರಿದೇವಿ ಬಿರಾದರ್ ಅವರನ್ನು ಯಾದಗಿರಿ ಜಿಲ್ಲೆಯ ಡಿಎಸ್‌ಬಿಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಮಂಜುನಾಥ ಎಸ್‌ ರವರನ್ನು ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ರಾಜೇಶ್ ಕೆ ಭಟಗುರ್ಕಿ ಅವರನ್ನು ವಿಜಯನಗರ ಜಿಲ್ಲೆಯ ಹಂಪಿ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಎಸ್‌ಐ ಶಿವರತ್ನ ಎಸ್‌ ಅವರನ್ನು ಕೆಎಸ್‌ಪಿಟಿಎಸ್‌ ಚನ್ನಪಟ್ಟಣಕ್ಕೆ ವರ್ಗಾವಣೆ ಮಾಡಲಾಗಿದೆ.

Author Image

Advertisement