ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭ

09:05 AM May 07, 2024 IST | Bcsuddi
Advertisement

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ, ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯಲಿದೆ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಮೊದಲ ಎರಡು ಹಂತಗಳ ಮತದಾನ ಮುಗಿದ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ.

Advertisement

ಮೂರನೇ ಹಂತದಲ್ಲಿ 10 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 94 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕ, ಕೇರಳ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸಹಿತ ಪ್ರಮುಖ ರಾಜ್ಯಗಳಲ್ಲಿ 3 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಎರಡನೇ ಹಂತದ ಮತದಾನದಲ್ಲಿ ರಾಜ್ಯದಲ್ಲಿ ಈಗಾಗಲೇ 14 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಇಂದು ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

 

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಬೆಳಗಾವಿ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳು ಭಾರಿ ಕುತೂಹಲ ಕೆರಳಿಸಿರುವ ಕ್ಷೇತ್ರಗಳಾಗಿವೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ನಿಂತಿರುವ ಕಾರಣ, ಬಿಜೆಪಿ ಗೆಲುವು ಕಷ್ಟವಾಗುತ್ತಾ ಎನ್ನುವ ಕುತೂಹಲ ಇದೆ.

 

ಶ್ರೀರಾಮುಲು (ಬಳ್ಳಾರಿ), ಜಗದೀಶ್ ಶೆಟ್ಟರ್ (ಬೆಳಗಾವಿ), ಪ್ರಿಯಾಂಕ ಜಾರಕಿಹೊಳಿ (ಚಿಕ್ಕೋಡಿ), ವಿಶ್ವೇಶ್ವರ ಹೆಗಡೆ ಕಾಗೇರಿ (ಉತ್ತರ ಕನ್ನಡ), ಬಸವರಾಜ ಬೊಮ್ಮಾಯಿ (ಹಾವೇರಿ), ಬಿವೈ ರಾಘವೇಂದ್ರ (ಶಿವಮೊಗ್ಗ) ಕಣದಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.

Advertisement
Next Article