ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕರೆ

05:39 PM Aug 27, 2024 IST | BC Suddi
Advertisement

ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ ಎಂದರು.

ಇದೇ ವೇಳೆ ಹೆಚ್‌ಡಿಕೆ ಬಗ್ಗೆ ಟಾಂಗ್‌ ನೀಡಿದ ಅವರು, ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು, ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸ್ ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ  ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ ಎಂದ ಹೇಳಿದರು. ಅವರ ಹೇಳಿಕೆಗೆ ನನಗೆ ಆಶ್ಚರ್ಯ ಆಯಿತು ಎಂದರು.

ಅವರು ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article