ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಪಾಲ ಗೆಹ್ಲೋಟ್‌ಗೆ Z ಶ್ರೇಣಿಯ ಭದ್ರತೆ

12:43 PM Oct 15, 2024 IST | BC Suddi
Advertisement

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರದಾದ್ಯಂತ ಸುದ್ದಿಯಲ್ಲಿದ್ದಾರೆ. ಈ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ವಿರುದ್ಧ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಅವರಿಗೆ ಬುಲೆಟ್​ ಪ್ರೂಫ್​ ಕಾರು ನೀಡಲಾಗಿತ್ತು. ಇದೀಗ ಅವರಿಗೆ ಕೇಂದ್ರ ಸರ್ಕಾರ ಮತ್ತಷ್ಟು ಭದ್ರತೆ ಹೆಚ್ಚಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ರಾಜ್ಯಪಾಲರು ಅಧಿಕಾರ ಸ್ವೀಕರಿಸಿದಾಗಲೇ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಆ ಕಾರನ್ನು ವಾಪಸ್ ಕಳುಹಿಸಿದ್ದರು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆಗಳು ನಡೆದಿತ್ತು. ಈ ಪ್ರತಿಭಟನೆಯ ನಂತರ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನೆಗಳು ನಡೆದ ಬಳಿಕ ಪೂರ್ವ ನಿಗದಿಯಾಗಿದ್ದ ಹಲವು ಕಾರ್ಯಕ್ರಮಗಳನ್ನು ರಾಜ್ಯಪಾಲರು ರದ್ದು ಮಾಡಿದ್ದರು.

Advertisement

Advertisement
Next Article