ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

10:01 AM Feb 14, 2024 IST | Bcsuddi
Advertisement

ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

Advertisement

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.

Advertisement
Next Article