ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

07:43 AM Aug 31, 2024 IST | BC Suddi
Advertisement

 

Advertisement

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಅವೃತ್ತಿ) ಪ್ರಥಮ ವರ್ಷದ B.A./B.Com, B.Sc., B.Lib.I.Sc., B.C.A.,B.B.A., B.S.W.,  M.A/M.Com, M.A.-M.C.J., M.Lib.I.Sc., M.B.A., M.Sc., M.C.A., M.S.W.,  ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು  PG-Diploma/ Diploma/Certificate  ಕೋರ್ಸ್ಗಳ ಪ್ರವೇಶಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ ಜುಲೈ 22 ರಿಂದ ಪ್ರಾರಂಭವಾಗಿದೆ.

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ/ಕೋರ್ಸ್ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್  www.ksoumysuru.ac.in     ವೀಕ್ಷಿಸುವುದು ಅಥವಾ ಮೊ.ನಂ. 8722669855, 7204352581, 9008905457, 8277205613 ಸಂಪರ್ಕಿಸಬಹುದುಉ ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags :
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
Advertisement
Next Article