ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಖರ್ಗೆ -ದೇವೇಗೌಡರ ಭೇಟಿ!

04:20 PM Dec 15, 2023 IST | Bcsuddi
Advertisement

ನವದೆಹಲಿ: 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

Advertisement

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತಾದ ಮಾತುಕತೆಯೊಂದು ನಡೆಯಲು ಬಾಕಿ ಇರುವಾಗಲೇ ಹೊಸ ವಿಚಾರವೊಂದನ್ನು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಅವರು, ಸಂಸತ್‌ ಭವನದಲ್ಲಿ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಸುದೀರ್ಘ ಮಾತುಕತೆ ನಡೆಸಿದರು ಎಂದು ತಿಳಿದ್ದಾರೆ. ಇದೀಗ ಈ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

Advertisement
Next Article