ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯ ಸರ್ಕಾರದಿಂದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

05:01 PM Dec 05, 2023 IST | Bcsuddi
Advertisement

ಬೆಂಗಳೂರು: ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಸಿಎಂ ಸಿದ್ದ ರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ್ ಅವರು ಪ್ರಾಂಜಲ್ ಅವರು ಕುಟುಂಬಕ್ಕೆ ಚೆಕ್ ನೀಡಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂಇದೆ. ಯೋಧರ ಸಾವು –ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ.

ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಬರೆದುಕೊಂಡಿದ್ದಾರೆ.

Advertisement
Next Article