ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯ ಸರ್ಕಾರದಿಂದ BPL ಕಾರ್ಡ್ ದಾರರಿಗೆ ಬಿಗ್ ಶಾಕ್..!

11:50 AM Oct 02, 2024 IST | BC Suddi
Advertisement

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎನ್ನುವಂತೆ ಇವರಿಗೆ ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಿಲಾಗಿದೆ.

Advertisement

ರಾಜ್ಯದಲ್ಲಿ ಅನರ್ಹ ರೇಷನ್ ಕಾರ್ಡ್ ಗಳ ರದ್ದು ಕಾರ್ಯವನ್ನು ಆಹಾರ ಇಲಾಖೆ ಚುರುಕುಗೊಳಿಸಿದೆ. ಇದರ ಭಾಗವಾಗಿ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕುಟುಂಬ ತಂತ್ರಾಂಶದ ಮೊರೆ ಹೋಗಿದೆ. ಇದುವರೆಗೂ ಒಟ್ಟು 22,62,413 ಅನರ್ಹ ರೇಷನ್ ಕಾರ್ಡ್ ಗಳನ್ನು ಪತ್ತೆ ಮಾಡಿದೆ.

ಬಿಪಿಎಲ್ ಕಾರ್ಡ್ ರದ್ದಿಗೆ ಸರ್ಕಾರ ಕೆಲವು ಮಾನದಂಡಗಳನ್ನು ನಿಗದಿ ಮಾಡಿದೆ. ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತಲೂ ಹೆಚ್ಚು ಹೊಂದಿರುವವರು, ಕಾರ್ ಮತ್ತು ಬೈಕ್, ಸೈಟ್, 3 ಹೆಕ್ಟೇರ್‌ ಭೂಮಿ, ನೀರಾವರಿ ಭೂಮಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರೋ ಎಲ್ಲರ ರೇಷನ್ ಕಾರ್ಡ್ಗಳು ರದ್ದಾಗಲಿವೆ. ಸರ್ಕಾರಿ, ಖಾಸಗಿ ಉದ್ಯೋಗದಲ್ಲಿರೋರಿಗೂ ಸೇರಿ 14 ಮಾನದಂಡಗಳ ಪ್ರಕಾರ ರೇಷನ್ ಕಾರ್ಡ್ ರದ್ದಿಗೆ ಆಹಾರ ಇಲಾಖೆ ಮುಂದಾಗಿದೆ

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್‌ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Next Article