For the best experience, open
https://m.bcsuddi.com
on your mobile browser.
Advertisement

'ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು'- ಬಿಎಸ್ ವೈ

05:47 PM May 11, 2024 IST | Bcsuddi
 ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು   ಬಿಎಸ್ ವೈ
Advertisement

ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು, ಜನರನ್ನ ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದ್ದು, ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದಿದ್ದಾರೆ.

ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗ ಉಂಟಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು, ನಾವು 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲೆಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಎಂದು ತಿಳಿಸಿದರು.

Advertisement

Author Image

Advertisement