For the best experience, open
https://m.bcsuddi.com
on your mobile browser.
Advertisement

'ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ: 'ಪೊಲೀಸರಿಂದ ತನಿಖೆ ನಡೆಯುತ್ತಿದೆ'- ಸಿಎಂ

06:37 PM Mar 01, 2024 IST | Bcsuddi
 ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ   ಪೊಲೀಸರಿಂದ ತನಿಖೆ ನಡೆಯುತ್ತಿದೆ   ಸಿಎಂ
Advertisement

ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂ ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಆ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟು ಹೋ ಗಿರುವುದು ತಿಳಿದುಬಂದಿದೆ. ಈ ಕುರಿತು ಪೊಲೀಸರುತನಿಖೆ ನಡೆಸುತ್ತಿದ್ದಾರೆ ಎಂದರು.ಇದು ಉಗ್ರರು ಮಾಡಿರುವ ಬಗ್ಗೆ ಇನ್ನೂ ಗೊತ್ತಿಲ್ಲ. ಇದೊಂದು ಸುಧಾರಿತ ಸ್ಫೋ ಟಕದ ಪ್ರಕರಣವಾಗಿದೆ ಭಾರಿ ಪ್ರಮಾಣದಲ್ಲೇನೂ ನಡೆದಿಲ್ಲ.ಸಣ್ಣ ಪ್ರಮಾಣದಾದ್ದರೂ ಅದು ಪರಿಣಾಮಕಾರಿಯಾಗಿದೆ' ಎಂದು ಹೇಳಿದರು.

ಎಲ್ಲರ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಆದರೆ, ಇಂತಹ ಘಟನೆ ನಡೆಯಬಾರದು. ಇತ್ತೀಚೆಗೆ ಇಂಥದ್ದು ಆಗಿರಲಿಲ್ಲ.ಮಂಗಳೂರಲ್ಲಿ ಘಟನೆ ನಡೆದಿತ್ತು. ಬಿಜೆಪಿ ಸರ್ಕಾರದಲ್ಲೂ ಹಲವು ಸ್ಫೋ ಟಗಳು ನಡೆದಿದ್ದವು. ನಮ್ಮ ಸರ್ಕಾರದಲ್ಲಿ ಇದೇ ಮೊದಲ ಘಟನೆಯಾಗಿದೆ. ಆರೋ ಪಿಗಳನ್ನ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

Advertisement

ಸ್ಫೋಟಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷದವರು ರಾಜಕಾರಣ ಮಾಡಬಾರದು, ತನಿಖೆಗೆ ಸಹಕಾರ ಕೊಡಬೇಕು' ಎಂದು ಕೋ ರಿದರು.ಪೊಲೀ ಸರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿಯೊಬ್ಬ ಕ್ಯಾಷಿಯರ್ ಬಳಿ ಹೋ ಗಿ ಟೋಕನ್ ತೆಗೆದುಕೊಂಡಿದ್ದಾನೆ. ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.ಗಾಯಾಳುಗಳಿಗೆ ಪರಿಹಾರ ವಿಚಾರ ಈ ಕುರಿತು ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಸ್ಥಳಕ್ಕೆ ಹೋಗುವಂತೆ ಗೃಹ ಸಚಿವರಿಗೆ ಹೇಳಿದ್ದೇ ನೆ.ಸಂಪೂರ್ಣ ಮಾಹಿತಿ ಸಿಕ್ಕ ಬಳಿಕ ತಿಳಿಸುವೆ' ಎಂದರು.

Author Image

Advertisement