ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌: ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್‌

12:16 PM Apr 12, 2024 IST | Bcsuddi
Advertisement

ಬೆಂಗಳೂರು:ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಿಬ್ಬರು ನಕಲಿ ದಾಖಲಾತಿಗಳನ್ನು ನೀಡಿ ಕೋಲ್ಕತ್ತಾದಲ್ಲಿ ಮನೆಯನ್ನು ಬಾಡಿಗೆ ಪಡೆದಿದ್ದರು. ಬಾಡಿಗೆ ಪಡೆಯುವ ಮೊದಲು ಲಾಡ್ಜ್ ಗಳಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ.

ಈ ಹಿಂದೆ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು.ಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

Advertisement
Next Article