ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರನನ್ನ ವಶಕ್ಕೆ ಪಡೆದ ಎನ್ಐಎ

09:25 AM Mar 08, 2024 IST | Bcsuddi
Advertisement

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನ ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್​ನನ್ನ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Advertisement

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ ಸಯ್ಯದ್ ಸಮೀರ್ ಎಂಬಾತನನ್ನ ಎನ್ಐಎ ಬಂಧಿಸಿತ್ತು. ಬಳಿಕ ಆತನನ್ನ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮಿನಾಜ್ ಕೈವಾಡವಿರುವ ಕುರಿತು ಮಹತ್ವದ ಸುಳಿವುಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆಯಲಾಗಿದೆ.

ಐಸಿಸ್ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಸುಲೇಮಾನ್​ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಇದಕ್ಕಾಗಿಯೇ ಅಲ್ಪಸಂಖ್ಯಾತ ಸಮುದಾಯದ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ. 2023 ರ ಡಿಸೆಂಬರ್ 18 ರಂದು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ಎನ್ಐಎ ಅಧಿಕಾರಿಗಳು ಮಿನಾಜ್​​ನನ್ನು ಬಂಧಿಸಿದ್ದರು. ಬಳಿಕ ಆತನನ್ನು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಮಹತ್ವದ ಸುಳಿವು ಆಧರಿಸಿ ಮಾರ್ಚ್ 6 ರಂದೇ ಶಂಕಿತ ಉಗ್ರ ಮಿನಾಜ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಸಲ್ಲಿಸಿ ಆತನನ್ನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Next Article