For the best experience, open
https://m.bcsuddi.com
on your mobile browser.
Advertisement

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಫಲಾನುಭವಿಗಳಿಗೆ ಸಹಾಯಧನ.!

07:11 AM May 07, 2024 IST | Bcsuddi
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಫಲಾನುಭವಿಗಳಿಗೆ ಸಹಾಯಧನ
Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕರ‍್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ‍್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ ((Ripening Chamber),), ಹಸಿರುಮನೆ ನರ‍್ಮಾಣ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

Advertisement

ಈ ಕರ‍್ಯಕ್ರಮದಡಿ ಘಟಕಗಳನ್ನು ಮರ‍್ಗಸೂಚಿಯನ್ವಯ ನರ‍್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು ರ‍್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನರ‍್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ರ‍್ಕಾರ ನಿಗದಿಪಡಿಸಿದ ಮರ‍್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ರ‍್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನರ‍್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂರ‍್ಕಿಸುವುದು. ಮಲ್ಲಿಕರ‍್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  (ಜಿಪಂ) ದೇವನಹಳ್ಳಿ- ಮೊ. 9480461234. ಎಂ.ಎಸ್.ದೀಪಾ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೊಡ್ಡಬಳ್ಳಾಪುರ. ಮೊ. 9880210892. ರೇಖಾ ಬಿ.ಪಿ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  (ಜಿಪಂ) ಹೊಸಕೋಟೆ- ಮೊ. 8217210320. ಹರೀಶ್. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  (ಜಿಪಂ) ನೆಲಮಂಗಲ-ಮೊ. 9880461607 ಗೆ ಸಂರ‍್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement