For the best experience, open
https://m.bcsuddi.com
on your mobile browser.
Advertisement

ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ

10:05 AM Dec 06, 2023 IST | Bcsuddi
ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ
Advertisement

ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈದು ಪರಾರಿಯಾದ ಘಟನೆ ಜೈಪುರದಲ್ಲಿ ನಡೆದಿದೆ. ಗೊಗಮೆಡಿ ಅವರು ಮಧ್ಯಾಹ್ನ 1.45 ರ ಸುಮಾರಿಗೆ ತನ್ನ ಮನೆಯಲ್ಲಿದ್ದ ವೇಳೆ ಮನೆಯೊಳಗೆ ಬಂದ ಇಬ್ಬರು ಅಪರಿಚಿತರು ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ಗೊಗಮೆಡಿಯವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಗೊಗಮೆಡಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ನಡೆದ ಸಂದರ್ಭ ಗೊಗಮೆಡಿ ಜೊತೆಗಿದ್ದ ಗನ್ ಮ್ಯಾನ್ ಅಜಿತ್ ಸಿಂಗ್ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ ಬಂದ್​ಗೆ ಕರೆ ನೀಡಲಾಗಿದೆ.

Advertisement
Author Image

Advertisement