ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ'- ಸಿಎಂ

06:19 PM Sep 18, 2024 IST | BC Suddi
Advertisement

ಬೆಂಗಳೂರು:ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ.ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ.ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು.

Advertisement

ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ.

ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ.ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು.ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ.ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.‌ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ಎಂದರು.

ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ. ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದರು.ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ನುಡಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article