For the best experience, open
https://m.bcsuddi.com
on your mobile browser.
Advertisement

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

09:55 AM Sep 21, 2024 IST | BC Suddi
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು
Advertisement

ನವದೆಹಲಿ :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಯುಎಸ್ ಭೇಟಿಯ ವೇಳೆ ಮಾಡಿದ ಹೇಳಿಕೆಗಳ ಮೂಲಕ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ.

ಮೀಸಲಾತಿ ಕುರಿತು ಟೀಕೆ ಮಾಡಿದ ಆರೋಪವನ್ನೂ ಹೊರಿಸಲಾಗಿದೆ ಎಂದು ಸಿಗ್ರಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement