ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರುಚಿಕರವಾದ ಅರಶಿನದ ಎಲೆ ಕಡುಬು ಸವಿಯಿರಿ

09:11 AM Jul 12, 2024 IST | Bcsuddi
Advertisement

ಬೇಕಾಗುವ ಸಾಮಾಗ್ರಿಗಳು: ದೋಸೆ ಅಕ್ಕಿ/ಕುಚ್ಚಲಕ್ಕಿ- 2 ಕಪ್, ಬೆಲ್ಲ – 1 ಕಪ್, ತೆಂಗಿನತುರಿ – 1 ಕಪ್, ಅರಶಿನ ಎಲೆ, ರುಚಿಗೆ ತಕ್ಕಷ್ಟು ಉಪ್ಪು, ಎಳ್ಳು – ಸ್ವಲ್ಪ

Advertisement

ಮಾಡುವ ವಿಧಾನ: 2 ಗಂಟೆ ಕಾಲ ನೆನೆಸಿದ ದೋಸೆ ಅಕ್ಕಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ (ಕುಚ್ಚಲಕ್ಕಿಯಾದ್ರೆ 6 ಗಂಟೆ ಕಾಲ ನೆನೆಸಿಡಬೇಕು). ನೀರು ಜಾಸ್ತಿ ಸೇರಿಸದೆ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು. ಬಳಿಕ ಇನ್ನೊಂದು ಪಾತ್ರೆಯಲ್ಲಿ 1 ಕಪ್ ಬೆಲ್ಲವನ್ನು ತುರಿದು ಅದಕ್ಕೆ 1 ಕಪ್ ಕಾಯಿತುರಿ ಸೇರಿಸಿ ಮಿಕ್ಸ್ ಮಾಡಿ. ಈ ಮಿಶ್ರಣಕ್ಕೆ ಹುರಿದ ಕಪ್ಪು ಎಳ್ಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಅರಶಿನ ಎಲೆ ತೆಗೆದುಕೊಂಡು ಅದಕ್ಕೆ ಅಕ್ಕಿ ಹಿಟ್ಟನ್ನು ಸವರಿ. ದಪ್ಪವಾಗಿ ಬೇಡ ತೆಳ್ಳಗೆ ಹಾಕಬೇಕು. ಇದರ ಮೇಲೆ ಬೆಲ್ಲ, ಕಾಯಿತುರಿಯ ಮಿಶ್ರಣವನ್ನು ಹಾಕಿ ಎಲೆಯನ್ನು ಮಡಚಿ. ನಂತರ ಇದನ್ನು ಇಡ್ಲಿ ಪಾತ್ರೆಯಲ್ಲಿಟ್ಟು 10-15 ನಿಮಿಷ ಕಾಲ ಹಬೆಯಲ್ಲಿ ಬೇಯಿಸಿದರೆ ಬಾಯಲ್ಲಿ ನೀರೂರುವ ರುಚಿಯಾದ ಅರಶಿನ ಎಲೆ ಕಡುಬು ರೆಡಿ.

Advertisement
Next Article