ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೆಪೋ ದರ ಶೇ. 6.5ರಲ್ಲಿ ಮುಂದುವರಿಸಲು ಆರ್‌ಬಿಐ ನಿರ್ಧಾರ

12:14 PM Jun 07, 2024 IST | Bcsuddi
Advertisement

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಪ್ರಕಟಿಸಿದ್ದಾರೆ.

Advertisement

ಬುಧವಾರದಿಂದ ನಡೆದ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಕ್ತಿಕಾಂತ ದಾಸ್ ಅವರು, ಹಣದುಬ್ಬರ ಇನ್ನೂ ಗುರಿಗಿಂತ ಮೇಲೆಯೇ ಇರುವುದರಿಂದ ಇನ್ನಷ್ಟು ಕಾಲ ಬಡ್ಡಿದರ ಮುಂದುವರಿಸುವುದು ಸೂಕ್ತ ಎನ್ನುವ ನಿಲುವು ತಳೆದಿದ್ದಾರೆ. ಕಳೆದ 15-16 ತಿಂಗಳಿಂದ ಆರ್‌ಬಿಐ ತನ್ನ ರೆಪೋ ಅಥವಾ ಬಡ್ಡಿದರದಲ್ಲಿ ಬದಲಾವಣೆ ಮಾಡಿಲ್ಲ. 2023ರ ಫೆಬ್ರುವರಿ ೮ರಂದು ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅಲ್ಲಿಂದ ಈವರೆಗೂ ರೆಪೋ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಇನ್ನಷ್ಟು ತಿಂಗಳು ಇದೇ ದರ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಬಾರಿ ಆರ್‌ಬಿಐನಿಂದ ಬಡ್ಡಿದರದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ ಎಂದು ಆರ್ಥಿಕ ತಜ್ಞರು ಅಂದಾಜಿಸಿರುವುದು ನಿಜವಾಗಿದೆ. ಹಣದುಬ್ಬರ ಇನ್ನಷ್ಟು ಸಮಯ ಸ್ವಲ್ಪ ಮೇಲ್ಮಟ್ಟದಲ್ಲೇ ಇರುವುದರಿಂದ, ಮತ್ತು ಹಣದುಬ್ಬರ ಹೆಚ್ಚೇ ಇದ್ದರೂ ಜಿಡಿಪಿ ನಿರೀಕ್ಷೆಮೀರಿ ಬೆಳೆಯುತ್ತಿರುವುದರಿಂದ ರೆಪೋ ದರದಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಆರ್‌ಬಿಐಗೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ರೆಪೋದರ, ರಿವರ್ಸ್ ರೆಪೋ, ವಿತ್‌ಡ್ರಾಯಲ್ ಆಫ್ ಅಕಾಮೊಡೇಶನ್, ಎಸ್‌ಎಲ್‌ಆರ್ ಹೀಗೆ ವಿವಿಧ ದರಗಳ ಯಥಾಸ್ಥಿತಿ ಮುಂದುವರಿಯಲಿದೆ. ರೆಪೋ ದರದ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಈ ಬಾರಿಯ ಎಂಪಿಸಿ ಸಭೆಯ ವಿಶೇಷತೆ ಎಂದರೆ ಯಥಾಸ್ಥಿತಿ ಮುಂದುವರಿಸುವ ನಿರ್ಧಾರದ ಪರವಾಗಿ 4:2ರ ಬಹುಮತ ವ್ಯಕ್ತವಾಗಿದೆ.

 

Advertisement
Next Article